Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:11 - ಪರಿಶುದ್ದ ಬೈಬಲ್‌

11 ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೆಳ್ಳಿ ಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲಿನಿಂದ ಯೆರೂಸಲೇವಿುಗೆ ಕರಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:11
11 ತಿಳಿವುಗಳ ಹೋಲಿಕೆ  

ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.


ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1,000.


ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.


ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.


ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಕಹಬ್ಬವನ್ನು ಆಚರಿಸಿದರು.


ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.


ನೆಬೂಜರದಾನನು ಅಗ್ಗಿಷ್ಟಿಕೆಗಳನ್ನು ಮತ್ತು ಬಟ್ಟಲುಗಳನ್ನು ತೆಗೆದುಕೊಂಡು ಹೋದನು. ಅವನು ಬಂಗಾರದ ವಸ್ತುಗಳನ್ನು ಬಂಗಾರಕ್ಕಾಗಿಯೂ ಬೆಳ್ಳಿಯ ವಸ್ತುಗಳನ್ನು ಬೆಳ್ಳಿಗಾಗಿಯೂ ತೆಗೆದುಕೊಂಡು ಹೋದನು.


ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!


ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನ ಆಲಯದಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆಯೂ ರಾಜನ ಅರಮನೆಯಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ಉಳಿದಿರುವ ವಸ್ತುಗಳ ಬಗ್ಗೆಯೂ ಹೀಗೆನ್ನುತ್ತಾನೆ: ‘ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು