Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:3 - ಪರಿಶುದ್ದ ಬೈಬಲ್‌

3 ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:3
20 ತಿಳಿವುಗಳ ಹೋಲಿಕೆ  

ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


“ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”


ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?


“ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.


ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕೆಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”


ಅನಂತರ ಬಾಬಿಲೋನಿನ ಅರಸನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದೇವಾಲಯವನ್ನು ತಿರಿಗಿ ಕಟ್ಟಲು ವಿಶೇಷ ಅನುಮತಿಯನ್ನು ಕೊಟ್ಟನು.


ಕೆಲಸ ಮಾಡುವವರನ್ನು ತೊಂದರೆಪಡಿಸಬೇಡಿ. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡಬೇಡಿ. ಯೆಹೂದ್ಯರ ದೇಶಾಧಿಪತಿ ಮತ್ತು ಯೆಹೂದ್ಯ ನಾಯಕರು ಅದನ್ನು ಮತ್ತೆ ಕಟ್ಟಲಿ. ಹಿಂದಿನ ದೇವಾಲಯವಿದ್ದಲ್ಲಿಯೇ ಹೊಸದನ್ನು ಕಟ್ಟಲಿ.


ಯೆಹೋವನು ತನ್ನ ಆಲಯಕ್ಕಾಗಿ ಚೀಯೋನನ್ನೇ ಆರಿಸಿಕೊಂಡನು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು