Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇವಿುನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯಮಾಡಲಿ ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:4
15 ತಿಳಿವುಗಳ ಹೋಲಿಕೆ  

ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.


ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.


“ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.


ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.


ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


“ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”


ಯಾಕೋಬನ ಮನೆತನದಲ್ಲಿ ಅಳಿದುಳಿದವರು ಪರಾಕ್ರಮಿಯಾದ ದೇವರನ್ನು ಮತ್ತೆ ಅನುಸರಿಸತೊಡಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು