ಎಜ್ರ 1:7 - ಪರಿಶುದ್ದ ಬೈಬಲ್7 ಅಲ್ಲದೆ ಸೈರಸ್ ರಾಜನು ದೇವಾಲಯಕ್ಕೆ ಸಂಬಂಧಿಸಿದ ವಸ್ತುಗಳನ್ನೆಲ್ಲಾ ಹೊರತೆಗೆದನು. ನೆಬೂಕದ್ನೆಚ್ಚರ ಅರಸನು ಜೆರುಸಲೇಮ್ ದೇವಾಲಯದಿಂದ ಸೂರೆಮಾಡಿ ತಂದ ಸಾಮಾಗ್ರಿಗಳನ್ನು ತನ್ನ ವಿಗ್ರಹಗಳನ್ನಿಡುವ ಕೋಣೆಯಲ್ಲಿ ಇಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜೆರುಸಲೇಮಿನಿಂದ ಕೊಳ್ಳೆಹೊಡೆದು ತಂದಿದ್ದ ಸಾಮಾನುಗಳನ್ನು ನೆಬೂಕದ್ನೆಚ್ಚರನು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪಾರಸಿಯ ರಾಜನಾದ ಕೋರೆಷನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.