ಎಜ್ರ 10:1 - ಪರಿಶುದ್ದ ಬೈಬಲ್1 ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು. ಅಧ್ಯಾಯವನ್ನು ನೋಡಿ |
ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.