ಎಜ್ರ 10:16 - ಪರಿಶುದ್ದ ಬೈಬಲ್16 ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ ಸೆರೆಯಿಂದ ಮರಳಿ ಬಂದ ಇತರರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕ ಎಜ್ರನೂ ಆಯಾ ಗೋತ್ರಗಳ ಮುಖಂಡರೂ ಹೆಸರು ಹೆಸರಾಗಿ ನೇಮಕಗೊಂಡರು. ಹತ್ತನೆಯ ತಿಂಗಳಿನ ಮೊದಲನೆಯ ದಿನ, ಇವರ ಮೊದಲನೆಯ ಕೂಟ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡಿಸುವದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರೂ ಹೆಸರುಹೆಸರಾಗಿ ನೇವಿುಸಲ್ಪಟ್ಟರು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಕೂಟ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |