Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:2 - ಪರಿಶುದ್ದ ಬೈಬಲ್‌

2 ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗ ಶೆಕನ್ಯನು ಎಜ್ರನಿಗೆ, “ಇಸ್ರಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧ ದ್ರೋಹಮಾಡಿದ್ದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆ ಇನ್ನೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ - ಇಸ್ರಾಯೇಲ್ಯರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ [ನಮ್ಮನ್ನು ನಾವು ತಿದ್ದಿಕೊಳ್ಳುವ] ನಿರೀಕ್ಷೆಯು ಇನ್ನೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:2
17 ತಿಳಿವುಗಳ ಹೋಲಿಕೆ  

ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು.


ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.


ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.


ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.


ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರುವ ಶೆಕನ್ಯನ ಮಗನಾದ ಶೆಮಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು.


ಏಲಾಮನ ಸಂತತಿಯವರಲ್ಲಿ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ.


ಏಲಾಮ್ ಎಂಬ ಇನ್ನೊಂದು ಊರಿನವರು 1,254


ಏಲಾಮ್ ಎಂಬ ಮತ್ತೊಂದು ಊರಿನವರು 1,254


ಏಲಾಮಿನ ಸಂತತಿಯವರು 1,254


ಏಲಾಮಿನ ಸಂತತಿಯವರಲ್ಲಿ ಅತಲ್ಯನ ಮಗನಾದ ಯೆಶಾಯ ಮತ್ತು ಬೇರೆ ಎಪ್ಪತ್ತು ಮಂದಿ ಗಂಡಸರು;


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು