Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:3 - ಪರಿಶುದ್ದ ಬೈಬಲ್‌

3 ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸ್ವಾವಿುಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರೂ ಹೇಳಿಕೊಟ್ಟ ಬುದ್ಧಿವಾದಾನುಸಾರ ಇಂಥ ಎಲ್ಲಾ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವದಾಗಿ ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:3
25 ತಿಳಿವುಗಳ ಹೋಲಿಕೆ  

ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


“ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: ಏಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ, ಕಾಡು ಆಲೀವ್, ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು.


ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.


ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.


ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”


ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು