Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:6 - ಪರಿಶುದ್ದ ಬೈಬಲ್‌

6 ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿವಿುತ್ತ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:6
16 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.


ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.


ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.


ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನಕ್ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ.


ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.


ಯೇಷೂವನು ಯೋಯಾಕೀಮನ ತಂದೆ; ಯೋಯಾಕೀಮನು ಎಲ್ಯಾಷೀಬನ ತಂದೆ; ಎಲ್ಯಾಷೀಬನು ಯೋಯಾದನ ತಂದೆ;


ಚಬ್ಬಾಯನ ಮಗನಾದ ಬಾರೂಕನು ಮುಂದಿನ ಭಾಗವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನ ತನಕ ಗೋಡೆಯನ್ನು ಕಟ್ಟಿದನು.


ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.


ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.


ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು.


ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು