Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:7 - ಪರಿಶುದ್ದ ಬೈಬಲ್‌

7 ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತರುವಾಯ ಜುದೇಯದಲ್ಲೂ ಜೆರುಸಲೇಮಿನಲ್ಲೂ ಈ ಪ್ರಕಟನೆಯನ್ನು ಹೊರಡಿಸಲಾಯಿತು: “ಸೆರೆಯಿಂದ ಬಂದವರೆಲ್ಲರೂ ಜೆರುಸಲೇಮಿನಲ್ಲಿ ಒಂದುಗೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತರುವಾಯ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ - ಸೆರೆಯಿಂದ ಬಂದವರೆಲ್ಲರೂ ಯೆರೂಸಲೇವಿುನಲ್ಲಿ ಬಂದು ಕೂಡಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತರುವಾಯ ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿಗೆ ಕೂಡಿಬರಬೇಕೆಂದು ಸಮಸ್ತ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಸಾರಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:7
4 ತಿಳಿವುಗಳ ಹೋಲಿಕೆ  

ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.


ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.


ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು