Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:9 - ಪರಿಶುದ್ದ ಬೈಬಲ್‌

9 ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇವಿುನಲ್ಲಿ ಬಂದು ಕೂಡಿ ಆ ಸಂಗತಿಯ ನಿವಿುತ್ತವಾಗಿಯೂ ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಬೈಲಿನಲ್ಲಿ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:9
10 ತಿಳಿವುಗಳ ಹೋಲಿಕೆ  

ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಹೀಗೆ ಹತ್ತನೇ ತಿಂಗಳಾದ ಟೆಬೇತ್ ಮಾಸದಲ್ಲಿ ರಾಜನ ಏಳನೇ ವರ್ಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.


ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.


ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ.


ಅದು ನಡೆದದ್ದು ಒಂಭತ್ತನೇ ತಿಂಗಳಲ್ಲಿ, ರಾಜನಾದ ಯೆಹೋಯಾಕೀಮನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು. ರಾಜನ ಎದುರಿಗಿದ್ದ ಒಂದು ಸಣ್ಣ ಅಗ್ಗಿಷ್ಟಿಕೆಯಲ್ಲಿ ಬೆಂಕಿಯು ಉರಿಯುತ್ತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು