Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:1 - ಪರಿಶುದ್ದ ಬೈಬಲ್‌

1 ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲಿಗೆ ಸೆರೆಯೊಯ್ಯಲ್ಪಟ್ಟವರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:1
27 ತಿಳಿವುಗಳ ಹೋಲಿಕೆ  

ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು.


ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.


ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.


ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು. ರಾಜಸೇವಕರು ಆ ಆಜ್ಞೆಯನ್ನು ಪಾಲಿಸಿದರು.


ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.


ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.


ಮೇದ್ಯ ಪ್ರಾಂತ್ಯದ ಎಕ್‌ಬಟಾನ ಎಂಬ ಕೋಟೆಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು: ಸರಕಾರದ ಆಜ್ಞೆ:


ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.


ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.


ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.


ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.


ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು