ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.