Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:43 - ಪರಿಶುದ್ದ ಬೈಬಲ್‌

43 ದೇವಾಲಯದ ವಿಶೇಷ ಸೇವಕರು ಯಾರೆಂದರೆ: ಜೀಹ, ಹಸೂಫ, ಟಬ್ಬಾವೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಬ್ಬಾವೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವಸ್ಥಾನದ ಪರಿಚಾರಕರಲ್ಲಿ - ಜೀಹ, ಹಸೂಫ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೇವಸ್ಥಾನದಾಸರಲ್ಲಿ - ಜೀಹ, ಹಸೂಫ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:43
13 ತಿಳಿವುಗಳ ಹೋಲಿಕೆ  

ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.


ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.


ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನ ಸೇವಕರೂ ಒಟ್ಟು ಸೇರಿ 392


ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು 139


ಕೇರೋಸ್, ಸೀಯಹಾ, ಪಾದೋನ್,


ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು.


ಇನ್ನೂರಿಪ್ಪತ್ತು ಮಂದಿ ದೇವಾಲಯದ ಸೇವಕರು; (ಇವರ ಪೂರ್ವಿಕರು ದಾವೀದನ ಕಾಲದಲ್ಲಿ ಲೇವಿಯರಿಗೆ ಸಹಾಯಕರಾಗಿ ಆರಿಸಲ್ಪಟ್ಟವರಾಗಿದ್ದರು. ಅವರೆಲ್ಲರ ಹೆಸರುಗಳನ್ನು ಪಟ್ಟಿಮಾಡಲಾಗಿದೆ.)


ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.


“ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸಿಕೊಡು. ಅವರು ಇಸ್ರೇಲರ ಮಧ್ಯದಿಂದ ಆರೋನನಿಗೋಸ್ಕರವಾಗಿ ಪ್ರತಿಷ್ಠಿತರಾಗಿದ್ದಾರೆ.


ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.


ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.


ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೀಹ ಮತ್ತು ಗಿಷ್ಪ ಅವರ ಮುಖ್ಯಸ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು