Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:58 - ಪರಿಶುದ್ದ ಬೈಬಲ್‌

58 ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನ ಸೇವಕರೂ ಒಟ್ಟು ಸೇರಿ 392

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ದೇವಸ್ಥಾನದ ಎಲ್ಲ ಸೇವಕರು, ಸೊಲೊಮೋನನ ಆಳುಗಳು ಒಟ್ಟು 392 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಎಲ್ಲಾ ದೇವಸ್ಥಾನದಾಸರೂ ಸೊಲೊಮೋನನ ದಾಸರೂ ಒಟ್ಟು 392.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:58
12 ತಿಳಿವುಗಳ ಹೋಲಿಕೆ  

ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.


ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.


ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.


ದೇವಾಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು 392


ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.


ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.


ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೀ ಇವರ ಸಂತತಿಯವರು.


ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ: ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652


ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಹಿವ್ವೀಯರು ಮತ್ತು ಯೆಬೂಸಿಯರು.


ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು