Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:62 - ಪರಿಶುದ್ದ ಬೈಬಲ್‌

62 ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕರ ವೃತ್ತಿಯಿಂದ ನಿರಾಕೃತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:62
6 ತಿಳಿವುಗಳ ಹೋಲಿಕೆ  

“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು