Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:63 - ಪರಿಶುದ್ದ ಬೈಬಲ್‌

63 ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:63
23 ತಿಳಿವುಗಳ ಹೋಲಿಕೆ  

ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ.


ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು.


ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.


ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.


ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”


ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನುಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿದನು.


“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.


“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.


ಹುಳಿಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.


ಹೀಗೆ ಒಟ್ಟು ನಲವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿ ತಮ್ಮ ಸ್ವದೇಶಕ್ಕೆ ಹಿಂದಿರುಗಿದರು. ಇವರಲ್ಲಿನ ಅವರ ಏಳು ಸಾವಿರದ ಮುನ್ನೂರ ಮೂವತ್ತೇಳು ಸೇವಕಸೇವಕಿಯರನ್ನು ಸೇರಿಸಲಿಲ್ಲ. ಇವರೊಂದಿಗೆ ಇನ್ನೂರು ಮಂದಿ ಗಾಯಕಗಾಯಕಿಯರೂ ಇದ್ದರು.


ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.


ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು