ಎಜ್ರ 3:1 - ಪರಿಶುದ್ದ ಬೈಬಲ್1 ತಮ್ಮತಮ್ಮ ಸ್ವಂತ ಊರುಗಳಲ್ಲಿ ಹೋಗಿ ನೆಲೆಸಿದ್ದ ಇಸ್ರೇಲರು ಏಳನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಒಂದೇ ಮನಸ್ಸಿನಿಂದ ಬಂದು ಸೇರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರು, ಏಳನೆಯ ತಿಂಗಳಿನಲ್ಲಿ ಏಕ ಮನಸ್ಸಿನಿಂದ ಜೆರುಸಲೇಮಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ಯರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇವಿುಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿ |
ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: ಏಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ, ಕಾಡು ಆಲೀವ್, ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು.