ಎಜ್ರ 3:10 - ಪರಿಶುದ್ದ ಬೈಬಲ್10 ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲ್ಯರ ಅರಸನಾದ ದಾವೀದನು ನೇವಿುಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಕೀರ್ತಿಸುವದಕ್ಕೋಸ್ಕರ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆಯೂ ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು. ಅಧ್ಯಾಯವನ್ನು ನೋಡಿ |
ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”