Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:11 - ಪರಿಶುದ್ದ ಬೈಬಲ್‌

11 ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪರಸ್ಪರವಾಗಿ ಹಾಡುತ್ತಾ ಯೆಹೋವನನ್ನು ಕೀರ್ತಿಸುತ್ತಾ - ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲ್ಯರ ಮೇಲೆ ಶಾಶ್ವತವಾದದ್ದೆಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹ ಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:11
32 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!


ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು. ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು!


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”


ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ!


ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.


ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯದೊಳಗೆ ತಮ್ಮತಮ್ಮ ಸ್ಥಳಗಳಲ್ಲಿ ನಿಂತರು.


ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.


ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.


ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ಈ ನಗರವನ್ನು ನಿಮಗೆ ಕೊಟ್ಟಿದ್ದಾನೆ.


ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು.


ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು