ಎಜ್ರ 3:13 - ಪರಿಶುದ್ದ ಬೈಬಲ್13 ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ಹೇಳಲಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜನರು ಮಹಾಧ್ವನಿಯಿಂದ ಆರ್ಭಟಿಸುತ್ತಿದ್ದದರಿಂದ ಹರ್ಷಧ್ವನಿ ಯಾವದೋ ಅಳುವವರ ಧ್ವನಿ ಯಾವದೋ ಗೊತ್ತಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.