Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:2 - ಪರಿಶುದ್ದ ಬೈಬಲ್‌

2 ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:2
33 ತಿಳಿವುಗಳ ಹೋಲಿಕೆ  

ಯೂದನು ಯೋಹಾನನ ಮಗನು. ಯೋಹಾನನು ರೇಸನ ಮಗನು. ರೇಸನು ಜೆರುಬಾಬೆಲನ ಮಗನು. ಜೆರುಬಾಬೆಲನು ಸಲಥಿಯೇಲನ ಮಗನು. ಸಲಥಿಯೇಲನು ಸೇರಿಯ ಮಗನು.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ಯೆಹೋಯಾಕೀಮನು ಬಾಬಿಲೋನಿಗೆ ಸೆರೆಒಯ್ದ ಬಳಿಕ ಅವನಿಗೆ ಹುಟ್ಟಿದ ಗಂಡುಮಕ್ಕಳು: ಶೆಯಲ್ತೀಯೇಲ್,


ಆ ಬೆಳ್ಳಿಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ: (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು.)


ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.


ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.


“ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.


ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.


ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು.


ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ.


ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.


ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


“ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ಮೋಶೆಯು ದೇವರ ಮನುಷ್ಯನಾಗಿದ್ದನು. ಅವನ ಮಕ್ಕಳು ಲೇವಿಕುಲದಲ್ಲಿ ಸೇರಿಸಲ್ಪಟ್ಟಿದ್ದರು.


ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.


ಇಮ್ಮೇರನ ಸಂತತಿಯವರಲ್ಲಿ ಹನಾನೀ, ಜೆಬದ.


ಹಾರೀಮನ ಸಂತತಿಯವರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ.


ಪಷ್ಹೂರನ ಸಂತತಿಯವರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು