ಎಜ್ರ 3:6 - ಪರಿಶುದ್ದ ಬೈಬಲ್6 ದೇವಾಲಯವು ತಿರಿಗಿ ಕಟ್ಟಲ್ಪಡದಿದ್ದರೂ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಇಸ್ರೇಲರು ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಳನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಯೆಹೋವ ದೇವರ ಮಂದಿರದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ. ಅಧ್ಯಾಯವನ್ನು ನೋಡಿ |
ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.