Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:7 - ಪರಿಶುದ್ದ ಬೈಬಲ್‌

7 ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:7
20 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.


ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.


ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


“‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಪೇತ್ರನು ಅನೇಕ ದಿನಗಳವರೆಗೆ ಜೊಪ್ಪದಲ್ಲಿದ್ದನು. ಚರ್ಮಕಾರನಾದ ಸಿಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದನು.


ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ದೇವಾಲಯವು ತಿರಿಗಿ ಕಟ್ಟಲ್ಪಡದಿದ್ದರೂ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಇಸ್ರೇಲರು ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ಪ್ರಾರಂಭಿಸಿದರು.


ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.


ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು.


ದೇವಾಲಯದ ಕೆಲಸ ಮಾಡಿದವರಿಗೆ ಲೇವಿಯರು ಹಣವನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು