Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:9 - ಪರಿಶುದ್ದ ಬೈಬಲ್‌

9 ದೇವಾಲಯವನ್ನು ಕಟ್ಟುವ ಕೆಲಸವನ್ನು ಮೇಲ್ವಿಚಾರಣೆ ಮಾಡಿದವರು ಕೆಳಕಂಡಂತಿರುವರು. ಯೇಷೂವನೂ ಅವನ ಮಕ್ಕಳೂ; ಕದ್ಮೀಯೇಲನು ಮತ್ತು ಅವನ ಮಕ್ಕಳು (ಇವರು ಯೆಹೂದ ಸಂತತಿಯವರು.); ಲೇವಿಯನಾದ ಹೇನಾದಾದನ ಗಂಡುಮಕ್ಕಳು ಮತ್ತು ಅವನ ಅಣ್ಣತಮ್ಮಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು, ಅವನ ಮಕ್ಕಳು, ಸಹೋದರರು, ಕದ್ಮೀಯೇಲನು, ಅವನ ಮಕ್ಕಳು, ಹೇನಾದಾದನ ಮಕ್ಕಳು, ಅವರ ಮಕ್ಕಳು, ಬಂಧುಗಳು, ಇವರು ಎಲ್ಲರು ಕೂಡಿಬಂದು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಸಹೋದರರು, ಕದ್ಮೀಯೇಲನು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:9
6 ತಿಳಿವುಗಳ ಹೋಲಿಕೆ  

ಲೇವಿ ಕುಲದವರು ಯಾರೆಂದರೆ: ಹೋದವ್ಯನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮೀಯೇಲರ ಸಂತತಿಯವರು 74


ಲೇವಿಕುಲದವರಲ್ಲಿ: ಹೋದವ್ಯನವರಾದ ಯೇಷೂವನ ಮತ್ತು ಕದ್ಮೀಯೇಲನ ಸಂತಾನದವರು 74


ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.


ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ


ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.


ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು