Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:1 - ಪರಿಶುದ್ದ ಬೈಬಲ್‌

1-2 ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿರುತ್ತಾರೆಂಬದನ್ನು ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:1
14 ತಿಳಿವುಗಳ ಹೋಲಿಕೆ  

ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.


ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದದಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ?


ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.


ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು.


ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.


ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.


ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು