ಎಜ್ರ 4:10 - ಪರಿಶುದ್ದ ಬೈಬಲ್10 ಮತ್ತು ಮಹಾ ಬಲಿಷ್ಠನಾದ ಅಷೂರ್ ಬನಿಪಾಲನು ಕರೆತಂದು ಸಮಾರ್ಯ ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ಇರಿಸಿದ ಇತರ ಜನರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೆಹಾಯರು, ಏಲಾಮ್ಯರು ಇವರೂ ಮಹಾ ಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರೂ ಇತ್ಯಾದಿ ಶಿರೋಲೇಖ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ: ಅಧ್ಯಾಯವನ್ನು ನೋಡಿ |
ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.
ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.