ಎಜ್ರ 4:11 - ಪರಿಶುದ್ದ ಬೈಬಲ್11 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಸೇವಕರು ಅರ್ತಷಸ್ತ ರಾಜನಿಗೆ ಬರೆಯುವ ಪತ್ರ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು - ಅರ್ತಷಸ್ತರಾಜರಿಗೆ, ಖಾವಂದರ ಸೇವಕರಾದ ಹೊಳೆಯ ಈಚೆಯವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು: ಅಧ್ಯಾಯವನ್ನು ನೋಡಿ |
ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.