ಎಜ್ರ 4:12 - ಪರಿಶುದ್ದ ಬೈಬಲ್12 ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿ |
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.
ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.