ಎಜ್ರ 4:14 - ಪರಿಶುದ್ದ ಬೈಬಲ್14 ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದ್ದರಿಂದಲೇ ರಾಜರಿಗೆ ಈ ಪತ್ರವನ್ನು ಕಳುಹಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವಂತು ಅರಮನೆಯ ಉಪ್ಪನ್ನು ಉಣ್ಣುವವರಾದದರಿಂದ ಅರಸರಿಗೆ ಅಪಮಾನವುಂಟಾಗುವದನ್ನು ನೋಡಿ ಸುಮ್ಮನಿರುವದು ಉಚಿತವಲ್ಲವೆಂದು ತಿಳಿದು ಅರಸರಿಗೆ ಈ ಪತ್ರಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ. ಅಧ್ಯಾಯವನ್ನು ನೋಡಿ |
ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.