ಎಜ್ರ 4:19 - ಪರಿಶುದ್ದ ಬೈಬಲ್19 ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ಆ ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದ್ರೋಹಮಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಆಜ್ಞಾನುಸಾರ ವಿಚಾರಣೆಯಾಗುವಲ್ಲಿ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ತಿರುಗಿ ಬೀಳುತ್ತಾ ದ್ರೋಹಮಾಡುತ್ತಾ ದಂಗೆಯೆಬ್ಬಿಸುತ್ತಾ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದೇಶದ್ರೋಹ ಮಾಡುತ್ತಾ ಬಂದಿದ್ದಾರೆ. ಅಧ್ಯಾಯವನ್ನು ನೋಡಿ |
ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.