Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:23 - ಪರಿಶುದ್ದ ಬೈಬಲ್‌

23 ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಪಠನವಾದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇವಿುಗೆ ಹೋಗಿ ಬಲಾತ್ಕಾರದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮನಿಗೂ, ಕಾರ್ಯದರ್ಶಿ ಶಿಂಷೈಯಿಗೂ, ಅವರ ಜೊತೆಗಾರರಿಗೂ ಓದಿದ ತರುವಾಯ, ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ, ಒತ್ತಾಯದಿಂದ ಮತ್ತು ಅಧಿಕಾರದಿಂದ ಅವರನ್ನು ನಿಲ್ಲಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:23
8 ತಿಳಿವುಗಳ ಹೋಲಿಕೆ  

“ಹಿಂಸಿಸಲು ಮತ್ತು ಕೊಲ್ಲಲು ಜನರು ಯಾವಾಗಲೂ ಸಿದ್ಧರಾಗಿದ್ದಾರೆ.


ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.


ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.


ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.


ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು