ಎಜ್ರ 4:24 - ಪರಿಶುದ್ದ ಬೈಬಲ್24 ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಂದಿನಿಂದ ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದವರೆಗೂ ಯೆರೂಸಲೇವಿುನ ದೇವಾಲಯವನ್ನು ಕಟ್ಟುವ ಕೆಲಸವು ನಿಂತು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅಂದಿನಿಂದ ಪರ್ಷಿಯ ದೇಶದ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು. ಅಧ್ಯಾಯವನ್ನು ನೋಡಿ |
ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.
“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.