ಎಜ್ರ 4:4 - ಪರಿಶುದ್ದ ಬೈಬಲ್4 ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಕೈಗುಂದಿಸಿ ಕಟ್ಟದ ಹಾಗೆ ಬೆದರಿಸಿದ್ದಲ್ಲದೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು. ಅಧ್ಯಾಯವನ್ನು ನೋಡಿ |
ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.