ಎಜ್ರ 4:6 - ಪರಿಶುದ್ದ ಬೈಬಲ್6 ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು. ಅಧ್ಯಾಯವನ್ನು ನೋಡಿ |
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.
“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.