Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:7 - ಪರಿಶುದ್ದ ಬೈಬಲ್‌

7 ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ವಿುತ್ರದಾತ, ಟಾಬೆಯೇಲ್ ಈ ಮೊದಲಾದವರು ಪಾರಸಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಅರಾಮ್ಯ ಭಾಷೆಯಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:7
12 ತಿಳಿವುಗಳ ಹೋಲಿಕೆ  

ನಂತರ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಆ ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು.


ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.


ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ಸೇನಾದಂಡನಾಯಕನಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಆ ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು.


ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.


ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,


ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು.


ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.


ಅದಕ್ಕೆ ದೇಶಾಧಿಪತಿಯಾದ ರೆಹೂಮ ಮತ್ತು ಕಾರ್ಯದರ್ಶಿಯಾದ ಶಿಂಷೈ ಜೆರುಸಲೇಮಿನ ನಿವಾಸಿಗಳ ವಿರುದ್ಧವಾಗಿ ರಾಜ ಅರ್ತಷಸ್ತನಿಗೆ ಈ ರೀತಿ ಬರೆದರು:


ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.


ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.


ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,


“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು