ಎಜ್ರ 5:1 - ಪರಿಶುದ್ದ ಬೈಬಲ್1 ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್‍ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ಯೆಹೂದ್ಯರನ್ನು ಪ್ರಬೋಧಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು. ಅಧ್ಯಾಯವನ್ನು ನೋಡಿ |
ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.