Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:12 - ಪರಿಶುದ್ದ ಬೈಬಲ್‌

12 ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬೆಲಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬೆಲಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:12
28 ತಿಳಿವುಗಳ ಹೋಲಿಕೆ  

“ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.


ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.


ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.”


ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!


ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.


ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು