Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:13 - ಪರಿಶುದ್ದ ಬೈಬಲ್‌

13 ಅನಂತರ ಬಾಬಿಲೋನಿನ ಅರಸನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದೇವಾಲಯವನ್ನು ತಿರಿಗಿ ಕಟ್ಟಲು ವಿಶೇಷ ಅನುಮತಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಬಾಬಿಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಬಾಬಿಲೋನಿನ ಅರಸ ಸೈರಸನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಈ ದೇವಾಲಯವನ್ನು ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಬಾಬೆಲಿನ ಅರಸನಾದ ಕೋರೆಷನು ತನ್ನ ಆಳಿಕೆಯ ಮೊದಲನೆಯ ವರುಷದಲ್ಲಿ ಈ ದೇವಾಲಯವನ್ನು ತಿರಿಗಿ ಕಟ್ಟುವದಕ್ಕೆ ಅಪ್ಪಣೆ ಕೊಟ್ಟದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:13
5 ತಿಳಿವುಗಳ ಹೋಲಿಕೆ  

ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.


ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು