ಎಜ್ರ 5:15 - ಪರಿಶುದ್ದ ಬೈಬಲ್15 ಅರಸನಾದ ಸೈರಸನು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ), “ಈ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಜೆರುಸಲೇಮಿನ ದೇವಾಲಯದಲ್ಲಿಡು. ಹಿಂದೆ ದೇವಾಲಯವು ಎಲ್ಲಿ ಇತ್ತೋ ಅದೇ ಸ್ಥಳದಲ್ಲಿ ಅದನ್ನು ಪುನಃ ಕಟ್ಟು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನಿಗೆ - ಈ ಸಾಮಾನುಗಳನ್ನು ಯೆರೂಸಲೇವಿುನ ದೇವಾಲಯದಲ್ಲಿಡುವದಕ್ಕೋಸ್ಕರ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟಿಸು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನಿಗೆ, ‘ಈ ಸಾಮಗ್ರಿಗಳನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿರುವ ದೇವಾಲಯಕ್ಕೆ ತೆಗೆದುಕೊಂಡು ಹೋಗು. ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟು,’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”