ಎಜ್ರ 5:16 - ಪರಿಶುದ್ದ ಬೈಬಲ್16 ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇವಿುನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ತೀರಲಿಲ್ಲ ಎಂಬದಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.
ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”