Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:3 - ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಇವರ ಜೊತೆಗಾರರೂ ಅವರ ಬಳಿಗೆ ಬಂದು ಅವರನ್ನು - ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ಕೇಳಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:3
12 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನೆಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ.


ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು.


“ದೇವಾಲಯವನ್ನು ಕಟ್ಟಲು ನಿಮಗೆ ಯಾರು ಅಪ್ಪಣೆಕೊಟ್ಟರು?” ಎಂದು ಅವರ ನಾಯಕರನ್ನು ಪ್ರಶ್ನಿಸಿದೆವು.


ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.


ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಈ ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು.


ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.


ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.


ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು.


ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು