ಎಜ್ರ 5:5 - ಪರಿಶುದ್ದ ಬೈಬಲ್5 ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೂದ್ಯರ ಹಿರಿಯರು ತಮ್ಮ ದೇವರ ಕಟಾಕ್ಷಕ್ಕೆ ಪಾತ್ರರಾಗಿದ್ದದ್ದರಿಂದ ವಿಚಾರಿಸುವದಕ್ಕೆ ಬಂದವರು ಅವರಿಗೆ ಅಡ್ಡಿ ಮಾಡದೆ ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವವರೆಗೂ, ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಉತ್ತರವನ್ನು ಪತ್ರದಲ್ಲಿ ಕಳುಹಿಸಿದರು. ಅಧ್ಯಾಯವನ್ನು ನೋಡಿ |