ಎಜ್ರ 5:7 - ಪರಿಶುದ್ದ ಬೈಬಲ್7 ಪತ್ರದ ನಕಲು ಹೀಗಿದೆ: ಅರಸನಾದ ದಾರ್ಯಾವೆಷನಿಗೆ ವಂದನೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಅರಸನಿಗೆ ಕಳುಹಿಸಿದ ಪತ್ರದಲ್ಲಿದ್ದದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ. ಅಧ್ಯಾಯವನ್ನು ನೋಡಿ |
ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.