ಎಜ್ರ 6:1 - ಪರಿಶುದ್ದ ಬೈಬಲ್1 ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೆಷನು ಶೋಧಿಸಿದನು. ಈ ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸ ದಾರ್ಯಾವೆಷನ ಆಜ್ಞಾನುಸಾರ ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥ ಸಂಗ್ರಹದಲ್ಲಿ ಹುಡುಕಿನೋಡಿದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ದಾರ್ಯಾವೆಷನ ಆಜ್ಞಾನುಸಾರವಾಗಿ ಗ್ರಂಥಸಂಗ್ರಹವಾಗಿದ್ದ ಬಾಬೆಲಿನ ಭಂಡಾರದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು. ಅಧ್ಯಾಯವನ್ನು ನೋಡಿ |
ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.