ಎಜ್ರ 6:14 - ಪರಿಶುದ್ದ ಬೈಬಲ್14 ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೂದ್ಯರ ಹಿರಿಯರು ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರಬೋಧನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಸಾಗಿಸುತ್ತಾ ಬಂದು ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪಾರಸಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.