Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:15 - ಪರಿಶುದ್ದ ಬೈಬಲ್‌

15 ಆದಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರುಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:15
15 ತಿಳಿವುಗಳ ಹೋಲಿಕೆ  

ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಅದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)


ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರ್ಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.


ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.


ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು.


ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ.


ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು.


ಹೀಗೆ ಮಾಡಲು ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆ ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೆ ದಿನವನ್ನು ಗೊತ್ತುಪಡಿಸಲಾಯಿತು.


ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.


ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.


ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ.


ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:


ಆದ್ದರಿಂದ ಯೆಹೋವನು ಹೀಗೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”


“ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.


ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.


ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು