ಎಜ್ರ 6:16 - ಪರಿಶುದ್ದ ಬೈಬಲ್16 ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಜಕರೂ ಲೇವಿಯರೂ ಸೆರೆಯಿಂದ ತಿರಿಗಿ ಬಂದ ಬೇರೆ ಇಸ್ರಾಯೇಲ್ಯರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು. ಅಧ್ಯಾಯವನ್ನು ನೋಡಿ |
ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.