ಎಜ್ರ 6:17 - ಪರಿಶುದ್ದ ಬೈಬಲ್17 ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ ಇಸ್ರಾಯೇಲ್ಯರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿ |