ಎಜ್ರ 6:21 - ಪರಿಶುದ್ದ ಬೈಬಲ್21 ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸೆರೆಯಿಂದ ಬಂದ ಇಸ್ರಾಯೇಲ್ಯರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕ ಭೋಜನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು, ಅಧ್ಯಾಯವನ್ನು ನೋಡಿ |
ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.
ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.